ಬೆಂಗಳೂರು : ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.
ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯನ್ನು ಗ್ರೂಪ್ ಬಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿನ ಗ್ರಾಮ ಪಂಚಾಯಿಗಳಿಗೆ ಒಟ್ಟು 6021 ಪಿಡಿಒ ಹುದ್ದೆಗಳು ಮಂಜೂರಾಗಿದ್ದು,742 ಹುದ್ದೆಗಳು ಖಾಲಿ ಉಳಿದಿವೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಕ್ರಮಕೈಗೊಳ್ಳಲಾಗುವುದು ಎಂದ ಸಚಿವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇಮಕಾತಿ ಪ್ರಾಧಿಕಾರ ಆಗಿದ್ದಾರೆ ಎಂದು ತಿಳಿಸಿದ್ದಾರೆ.