ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರ ಸರಕಾರದ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುತ್ತಿದೆ. ರಾಜ್ಯ ಸರಕಾರ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯ ವಿಚಾರದಲ್ಲಿ ಗುಡ್ ನ್ಯೂಸ್ ಕೊಟ್ಟಿದೆ.

ಇಷ್ಟು ದಿನ ಆಯುಷ್ಮಾನ್ ಕಾರ್ಡ್ ಹೊಂದಲು ನಿರ್ಧಿಷ್ಟ ಸ್ಥಳದಲ್ಲಿಯೇ ನೋಂದಣಿ ಮಾಡಿಸಿಕೊಳ್ಳಬೇಕಿತ್ತು. ಆದ್ರೀಗ ರಾಜ್ಯ ಸರಕಾರ ಗ್ರಾಮೀಣಾ ಜನತೆಗೆ ತ್ವರಿತವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಲಭ್ಯವಾಗುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ 10 ರೂ. ಶುಲ್ಕದೊಂದಿಗೆ ಆಯುಷ್ಮಾನ್-ಆರೋಗ್ಯ ಕರ್ನಾಟಕ ಮಾಹಿತಿ ಮುದ್ರಿತ ಕಾಗದವನ್ನು ವಿತರಿಸಲಾಗುತ್ತದೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಅಭಿಯಾನವನ್ನು ಆಯೋಜಿಸಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವಂತೆ ಕ್ರಮ ವಹಿಸಲು ಸರ್ಕಾರ ಸೂಚನೆ ನೀಡಿದೆ.
