ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ : ಬೈಕ್, ಟಿವಿ, ಪ್ರಿಡ್ಜ್ ಇದ್ದರೂ ರದ್ದಾಗಲ್ಲ ನಿಮ್ಮ ಕಾರ್ಡ್

ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮನೆಯಲ್ಲಿ ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಸಚಿವ ಉಮೇಶ್ ಕತ್ತಿ ಹೊಸ ನಿಮಯಗಳನ್ನು ಜಾರಿಗೆ ತರುವುದಾಗಿ ಹೇಳಿದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸ್ವಪಕ್ಷೀಯ ಬಿಜೆಪಿ ಶಾಸಕರೇ ಸೇರಿದಂತೆ ವಿರೋಧ ಪಕ್ಷಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ ಸಂಬಂಧಿಸಿದಂತೆ ಈಗಿರುವ ಮಾನದಂಡವನ್ನೇ ಮುಂದುವರಿಸಲಾಗುವುದು, ಟಿವಿ, ಪ್ರಿಡ್ಜ್, ಬೈಕ್ ಇದ್ದರೂ ಕೂಡ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದಿದ್ದಾರೆ.

Comments are closed.