ಗುಂಡ್ಮಿ ಟೋಲ್ : ಹೆದ್ದಾರಿ ಜಾಗೃತಿ ಸಮಿತಿ ಹೋರಾಟ ಯಶಸ್ವಿ, ಸ್ಥಳೀಯರಿಗೆ ಶುಲ್ಕ ವಿನಾಯಿತಿ

ಕೋಟ : ಹೆದ್ದಾರಿ ಜಾಗೃತಿ ಸಮಿತಿ ಕರೆ ನೀಡಿದ್ದ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಂದ್ ಯಶಸ್ವಿಯಾಗಿದೆ. ಗುಂಡ್ಮಿಯ ನವಯುಗ ಟೋಲ್ ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಫಾಸ್ಟ್ಯಾಗ್ ಘೋಷಣೆಯ ಬೆನ್ನಲ್ಲೇ ನವಯುಗ ಕಂಪೆನಿ ಸ್ಥಳೀಯರಿಗೆ ನೀಡಲಾಗುತ್ತಿದ್ದ ವಿನಾಯಿತಿಯನ್ನು ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಹೋರಾಟಕ್ಕೆ ಕರೆ ನೀಡಿತ್ತು. ಅಂತೆಯೇ ಇಂದು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾಗಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸುಮಾರು 90ಕ್ಕೂ ಅಧಿಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದು, ಗುಂಡ್ಮಿ ಟೋಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾದಿಕಾರಿಗಳ ನೇತೃತ್ವದಲ್ಲಿ ಸಂಸದರು, ಸಚಿವರು, ಶಾಸಕರು, ನವಯುಗ ಕಂಪೆನಿಯ ಪ್ರತಿನಿಧಿಗಳು ಹಾಗೂ ಹೆದ್ದಾರಿ ಜಾಗೃತಿ ಸಮಿತಿಯ ನಡುವೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜನಪ್ರತಿನಿಧಿಗಳು ಸ್ಥಳೀಯರಿಗೆ ಸಂಪೂರ್ಣ ಶುಲ್ಕ ವಿನಾಯತಿಗೆ ಆಗ್ರಹಿಸಿದ್ದಾರೆ.

ಹಲವು ಸಮಯದ ವರೆಗೆ ಸಭೆ ಮುಂದುವರಿಯಿತು. ಇತ್ತ ಪ್ರತಿಭಟನಾಕಾರರು ತಮ್ಮ ಹಕ್ಕನ್ನು ನೀಡುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ. ಅಂತಿಮವಾಗಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಾಹನಗಳಿಗೆ ಶುಲ್ಕ ವಿನಾಯಿತಿ ಘೋಷಣೆ ಮಾಡಿದ್ದಾರೆ.

Comments are closed.