ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಮಿತಿ ಮೀರಿದೆ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ಮನೆಯ 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ನಿಖಿಲ್ ಕುಮಾರಸ್ವಾಮಿ ಅವರ ಸಹಾಯಕ, ಮೇಕಪ್ ಮ್ಯಾನ್, ಬೌನ್ಸರ್ ಸೇರಿದಂತೆ ಮನೆಯಲ್ಲಿಯ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರದ ನಿರ್ದೇಶಕ ಮತ್ತು ಇಬ್ಬರು ಸಹಾಯಕರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರ ಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ತಮ್ಮ ಸಂಪರ್ಕದಲ್ಲಿ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಸಂಪರ್ಕದಲ್ಲಿದ್ದ 6 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.