ಬೆಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವೆಂದು ರಾಜ್ಯ ಸರಕಾರ ಘೋಷಣೆ ಮಾಡಿದೆ. ಮಾತ್ರವಲ್ಲ ರಾಜ್ಯದಲ್ಲಿ ಸರಕಾರ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ಕಾಲೇಜು ಶಿಕ್ಷಣ ಇಲಾಖೆ 15 ದಿನಗಳ ಕಾಲ ಅಂದರೆ ಮಾರ್ಚ್ 28ರ ವರೆಗೆ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸಿದ್ದ ಸರಕಾರ ಇಂದು ಒಂದು ವಾರಗಳ ಕಾಲ ಶಾಲೆಗಳಿಗೆ ರಾಜ್ಯಾದ್ಯಂತ ರಜೆ ಘೋಷಿಸಿದೆ.

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯಾ ಪಿಯುಸಿ ಪರೀಕ್ಷೆಗಳು ಎಂದಿನಂತೆಯೇ ನಡೆಯಲಿದ್ದು, ಉಳಿದ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. 15 ದಿನಗಳ ಕಾಲ ರಜೆ ಘೋಷಿಸಿರೋ ಕುರಿತು ಸರಕಾರ ಈಗಾಗಲೇ ಸುತ್ತೋಲೆಯನ್ನು ಹೊರಡಿಸಿದೆ.

ಕೊರೊನಾ ಸೋಂಕು ಇನ್ನಷ್ಟು ವ್ಯಾಪಿಸೋ ಸಾಧ್ಯತೆಯಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಕ್ರಮವನ್ನು ಕೈಗೊಂಡಿದ್ದು, ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಡಕ್ ವಾರ್ನಿಂಗ್ ನೀಡಿದೆ.