ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಇದೀಗ ಕೊರೊನಾ ವಾರಿಯರ್ಸ್ ಗಳನ್ನೇ ಕಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಆವರ್ಸೆಯಲ್ಲಿ ಆರೋಗ್ಯಾಧಿಕಾರಿಗಳಿಗೆ ಹಾಗೂ ನಡೂರು ಮತ್ತು ಮಂದಾರ್ತಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಆರೋಗ್ಯಾಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ಮಾರ್ಗದರ್ಶನದಲ್ಲಿ ಆವರ್ಸೆ ಗ್ರಾಮ ಲೆಕ್ಕಿಗರು ಹಾಗೂ ಕೋಟ ಠಾಣೆಯ ಎಎಸೈ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

ಇನ್ನು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ವಾರಿಯರ್ಸ್ ಗಳ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.