ಪುತ್ತೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾಮಾನ್ಯವಾಗು ತ್ತಿದೆ. ಅದ್ರಲ್ಲೂ ಯುವ ಜನತೆ ಹೃದಯಾಘಾತದಿಂದ ಸಾವನ್ನಪ್ಪುತ್ತಿ ದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 16 ವರ್ಷದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ (16 ವರ್ಷ) ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಗಳ ಎರಡನೇ ಮಗಳಾಗಿರುವ ಶ್ರೇಯಾ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯೂ ಹೌದು., ಸದಾ ಲವಲವಿಕೆಯಿಂದಲೇ ಇರುತ್ತಿದ್ದಾಕೆಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿತ್ತು.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದ್ರೂ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಶ್ರೇಯಾ ಸಾವನ್ನಪ್ಪಿದ್ದಾಳೆ.