ಮುಂದಿನ 5 ದಿನ ಸುರಿಯುತ್ತೆ ಭಾರಿ ಮಳೆ : ಕರಾವಳಿ ಯಲ್ಲಿ ರೆಡ್ ಅಲರ್ಟ್ ಘೋಷಣೆ

0

ಬೆಂಗಳೂರು : ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇನ್ನೂ 5 ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರೋದ್ರಿಂದಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ಡಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 205 ಮಿಮೀಗಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇನ್ನು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಆರೆಂಜ ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿಯಲ್ಲಿ ಸೆಪ್ಟೆಂಬರ್ 14ರ ವರೆಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave A Reply

Your email address will not be published.