ಬೆಂಗಳೂರು : ರಾಜ್ಯದಲ್ಲಿ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ 12ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ಡಡ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಇನ್ನು ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಜುಲೈ 12ರವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದಲೇ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲಾಡಳಿತ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆಯನ್ನು ನೀಡಿದೆ. ಅಲ್ಲದೇ ತಗ್ಗು ಪ್ರದೇಶದಲ್ಲಿರುವ ಜನರ ಎಚ್ಚರದಿಂದ ಇರುವಂತೆಯೂ ಸೂಚಿಸಿದೆ.
ರಾಜ್ಯ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಲ್ಲಿಯೂ ಭಾರಿ ಮಳೆ ಸುರಿಯಲಿದೆ. ಮಳೆಯ ಹಿನ್ನೆಲೆಯಲ್ಲಿ ಬಿಸಿಲ ತಾಪಮಾನ ಕಡಿಮೆಯಾಗಿದೆ. ಹಲವು ಜಿಲ್ಲೆಗಳ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.