ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಕರಾವಳಿ ಭಾಗಗಳಲ್ಲಿ ಅಗಸ್ಟ್ 3 ರಿಂದ 7ರವರೆಗೆ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮಿನುಗಾರರು ಯಾವುದೇ ಕಾರನಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ.

ಇನ್ನು ರಾಜ್ಯದ ದಕ್ಷಿಣ ಒಳನಾಡಿನ ಭಾಗಗಳಲ್ಲಿಯೂ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಬೆಳಗಾವಿ, ಕೊಪ್ಪಳ, ದಾವಣಗೆರೆ, ರಾಯಚೂರು, ಹಾಸನ, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.