- Advertisement -
ಉಡುಪಿ : ಕಳೆದೊಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಅದ್ರಲ್ಲೂ ಸಮುದ್ರ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗಿದೆ.
ಕಡಲ್ಕೊರೆತದಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪಡುಕೆರೆ, ಕುತ್ಪಾಡಿ ಕಡಲತೀರ ಪ್ರದೇಶಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಲ್ಕೊರೆತದಿಂದ ತತ್ತರಿಸಿರುವ ಪ್ರದೇಶಗಳಲ್ಲಿನ ಜನರಿಗೆ ರಕ್ಷಣೆಯನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.