ಉಡುಪಿ, ಬೆಂಗಳೂರು, ಚಿಕ್ಕಮಗಳೂರಲ್ಲಿ ಭಾರಿ ಮಳೆ : ರಕ್ಷಣಾ ಕಾರ್ಯ ಕೈಗೊಳ್ಳಲು ಸಿಎಂ ಸೂಚನೆ

0

ಬೆಂಗಳೂರು : ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಯಲ್ಲಿ‌ ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ‌ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ,ರಾಜ ಕಾಲುವೆ,ತಗ್ಗು ಪ್ರದೇಶಗಳಲ್ಲಿ ವಿಶೇಷ ಗಮನಹರಿಸುವಂತೆ ಸೂಚನೆ ನೀಡಿದ್ದು,ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ ಅಂತ ಆದೇಶಿಸಿದ್ದಾರೆ.

ಮಳೆಯಿಂದ ಅತಿವೃಷ್ಠಿ ಕಂಡು ಬಂದಿರುವ ಪ್ರದೇಶಗಳಲ್ಲಿ ಜನರನ್ನು ಸುರಕ್ಷತೆ ಸ್ಥಳಾಂತರ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಅವರು ಸೂಚನೆ ನೀಡಿದ್ದಾರೆ.ಪ್ರವಾಹ ಪರಿಸ್ಥಿತಿ ಕಂಡು ಬಂದಿರುವ ಪ್ರದೇಶಗಳಿಗೆ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ತಂಡಗಳನ್ನು ರವಾನಿಸಿ ಜನರ ಪ್ರಾಣ ರಕ್ಷಿಸುವಂತೆಯೂ ಅವರು ಇದೆ ವೇಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave A Reply

Your email address will not be published.