ಹೆದ್ದಾರಿ ಟೋಲ್‌ನಲ್ಲಿ ಜಾಮ್ ಆದ್ರೆ ಇನ್ಮುಂದೆ ವಾಹನಗಳಿಗೆ ಉಚಿತ ಪ್ರಯಾಣ..!

ನವದೆಹಲಿ : ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಟೋಲ್ ಗಳಲ್ಲಿ ಇನ್ಮುಂದೆ ಹೊಸ ನಿಯಮ ಜಾರಿಗೆ ಬರುತ್ತಿದೆ. ಟೋಲ್ ಗಳಲ್ಲಿ ಜಾಮ್ ಆದ್ರೆ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ.

ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಸುಗಮ‌ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಿದೆ. ಆದರೂ ಕೂಡ ಟೋಲ್ ಗಳಲ್ಲಿ ವಾಹನ ದಟ್ಟಣೆ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸವಾರರು ಟೋಲ್ ಪಾವತಿ ಮಾಡಿದ್ದರೂ ಕೂಡ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಮಾಡುವುದರಿಂದ ಸಂಚಾರಕ್ಕೆ ತೊಡಕಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ.

ಎಲ್ಲಾ ವಾಹನಗಳ ಮಾಲೀಕರು ಫಾಸ್ಟ್ಯಾಗ್ ಕಡ್ಡಾಯವಾಗಿ ಅಳವಡಿಸಿಕೊಂಡಿದ್ದರೂ ಟೋಲ್ ಗಳಲ್ಲಿ ಕಿರಿಕಿರಿ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ ಎನ್ನಲಾಗುತ್ತಿದೆ.

Comments are closed.