ಹಿರೇನಾಗವಲ್ಲಿ ಸ್ಪೋಟ ಪ್ರಕರಣ : ಮೂವರ ಬಂಧನ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಸಾಗಿಸುವ ವೇಳೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೂವರನ್ನು ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಜಿಲೆಟಿನ್ ಸಾಗಾಟದ ವೇಳೆಯಲ್ಲಿ ಸ್ಪೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಗಂಗಾಧರ್, ಮುರುಳಿ, ಮಹೇಶ್, ರಾಮು ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದು, ಗಾಯಗೊಂಡ ಓರ್ವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಮುಖಂಡ ನಾಗರಾಜು ಹಾಗೂ ಆಂಧ್ರಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಎಂಬವರಿಗೆ ಸೇರಿದ ಕ್ರಷರ್ ಆಗಿದ್ದು, ಪೊಲೀಸರ ಕಣ್ಣು ತಪ್ಪಿಸಿ ಅಕ್ರಮವಾಗಿ ಸ್ಪೋಟಕಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಘಟನೆಯ ಬೆನ್ನಲ್ಲೇ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

Comments are closed.