ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ : ಕನಿಷ್ಠ 20 ದಿನ ಲಾಕ್ ಡೌನ್ ಮಾಡಿ : ಎಚ್ಡಿಕೆ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜನರ ಪ್ರಾಣದ ಜೊತೆಗೆ ಚೆಲ್ಲಾಟ ನಿಲ್ಲಿಸಿ, ಬೆಂಗಳೂರು ನಿವಾಸಿಗಳ ರಕ್ಷಣೆಗಾಗಿ ಕನಿಷ್ಠ 20 ದಿನಗಳ ಕಾಲ ಬೆಂಗಳೂರನ್ನು ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಮತ್ತು ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯಕ್ಕಿಂತ ಆರ್ಥಿಕತೆ ಮುಖ್ಯವಲ್ಲ ಎಂದಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸುವ ಕಾರ್ಯವನ್ನು ಮಾಡಬೇಕು. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ 5,000 ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರಕಾರ ಈಗಾಗಲೇ ಘೋಷಿಸಿರುವ ಪರಿಹಾರ ಇನ್ನೂ ಧಕ್ಕಿಲ್ಲ. ಬರೀ ಪ್ಯಾಕೇಜ್ ಘೋಷಣೆ ಮಾಡಿದ್ರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ ಸರಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

Leave A Reply

Your email address will not be published.