ಹುಬ್ಬಳ್ಳಿ : ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹದ ಆರೋಪದಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮೂವರು ಆರೋಪಿಗಳಿಗೆ ಮಾರ್ಚ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ವೇಳೆಯಲ್ಲಿ ಹಿಂದೂಪರ ಸಂಘಟನೆಗಳು ಆರೋಪಿಗಳ ಮೇಲೆ ಹಲ್ಲೆ ನಡೆಸಿ ಚಪ್ಪಲಿ ಹಾಗೂ ಕಲ್ಲು ಎಸೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿದ್ದ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆಯ ಪೊಲೀಸರು ಆರೋಪಿಗಳನ್ನು ಪೊಲೀಸರು ಸೆಕ್ಷನ್ 169ರ ಅಡಿಯಲ್ಲಿ ಬಾಂಡ್ ಬರೆಯಿಸಿಕೊಂಡು ಬಿಟ್ಟು ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ನಿನ್ನೆ ರಾತ್ರಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಪೊಲೀಸರ ಕ್ರಮದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಸಕಲ ಭದ್ರತೆಯ ನಡುವಲ್ಲೇ ಆರೋಪಿಗಳನ್ನು ಕರೆದೊಯ್ಯುವ ವೇಳೆಯಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಗೆ ನಡೆಸಿದ್ದಾರೆ.
ದೇಶದ್ರೋಹಿಗಳಿಗೆ 15 ದಿನ ನ್ಯಾಯಾಂಗ ಬಂಧನ : ಕೋರ್ಟ್ ಆವರಣದಲ್ಲೇ ಥಳಿತ, ಚಪ್ಪಲಿ ಸೇವೆ
- Advertisement -
RELATED ARTICLES