ಬೆಂಗಳೂರು : ಐಎಎಸ್ ಅಧಿಕಾರಿ ಬಿ.ಎಂ.ವಿಜಯ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. IMA ಬಹುಕೋಟಿ ವಂಚನೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿದ್ದ ಅಧಿಕಾರಿ ಇದೀಗ ತಮ್ಮ ನಿವಾಸದಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ನಡೆದಿರುವ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಂ.ವಿಜಯಶಂಕರ್ 1.50 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿತ್ತು. ಅಲ್ಲದೇ ಜೈಲು ಶಿಕ್ಷಕೆಯನ್ನು ಕೂಡ ಅನುಭವಿಸಿದ್ದರು. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.