ಐಎಂಎ ಬಹುಕೋಟಿ ವಂಚನೆ ಪ್ರಕರಣ : 3 ಮಂದಿ ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಇದೀಗ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.

ಐಎಎ ಸಂಸ್ಥೆ ಸಾವಿರಾರು ಜನರಿಗೆ ಕೋಟ್ಯಾಂತರ ರೂಪಾಯಿ ವಂಚನೆಯನ್ನು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಸುತ್ತಿರುವ ಸಿಬಿಐ ತನಿಖಾಧಿಕಾರಿಗಳು ಒಟ್ಟು 28 ಆರೀಪಿಗಳ ವಿರುದ್ದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು.

ಐಎಂಎ ಪ್ರಕರಣದಲ್ಲಿ ಈ ಹಿಂದೆ ತನಿಖೆಯನ್ನು ಮಾಡಿದ್ದ ಪೊಲೀಸ್ ಅಧಿಕಾರಿಗಳು ಸೇರಿದಂತೆ, ಸರಕಾರಿ ಅಧಿಕಾರಿಗಳು ವಂಚನೆಗೆ ಸಂಬಂಧಿಸಿದಂತೆ ಸರಿಯಾಗಿ ತನಿಖೆಯನ್ನು ನಡೆಸಿಲ್ಲ ಎಂದು ಹೇಳಿದೆ. ಐಪಿಎಸ್ ಅಧಿಕಾರಿಗಳಾದ ಐಜಿಪಿ ಹೇಮಂತ್ ನಿಂಬಾಳ್ಕರ್, ಕೆಎಸ್ಆರ್ ಟಿಸಿ ಕಮಾಂಡೆಂಟ್ ಅಜಯ್ ಹಿಲೋರಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು ಐದು ಮಂದಿಯ ವಿರುದ್ದ ದೋಷಾರೋಪ ಪಟ್ಟಿಯನ್ನು ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದರು.

ಇದೀಗ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ ಪಿಯಾಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಆಗಿದ್ದ ರಮೇಶ್ ಹಾಗೂ ಪಿಎಸ್ ಐ ಗೌರಿ ಶಂಕರ್ ಅವರನ್ನು ಅಮಾನತುಗೊಳಿಸಲಾಗಿದೆ.

ಆದರೆ ರಾಜ್ಯ ಸರಕಾರ ಕೆಳ ಹಂತದ ಅಧಿಕಾರಿಗಳನ್ನು ಅಮಾನತುಗೊಳಿಸಿ ಐಪಿಎಸ್ ಅಧಿಕಾರಿಗಳ ವಿರುದ್ದ ಕ್ರಮಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲೀಗ ರಾಜ್ಯ ಸಸರಕಾರ ಹೇಮಂತ್ ನಿಂಬಾಳ್ಕರ್ ರಕ್ಷಣೆಗೆ ನಿಂತಿದೆಯಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.

Comments are closed.