ರಾಜ್ಯದಲ್ಲಿ ಹೆಚ್ಚಿದ ಹಕ್ಕಿಜ್ವರ ಭೀತಿ : ಕೇರಳದಿಂದ ಕೋಳಿ ಸಾಗಾಟಕ್ಕೆ ನಿಷೇಧ

ಬೆಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದಲ್ಲಿಯೂ ಹಕ್ಕಿಜ್ವರದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವ ಕೋಳಿ ಹಾಗೂ ಕೋಳಿ ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಕೇರಳದಲ್ಲಿ ಈಗಾಗಲೇ ಕಾಗೆ, ಬಾತುಕೋಳಿಗಳು ನಿಗೂಢವಾಗಿ ಸಾಯುತ್ತಿರೋ ಬೆನ್ನಲ್ಲೇ ಹಕ್ಕಿ ಜ್ವರದ ಸೋಂಕು ದೃಢಪಟ್ಟಿದೆ. ಅಲ್ಲದೇ ಕರಾವಳಿ ಭಾಗದಲ್ಲಿಯೂ ಹಕ್ಕಿಗಳ ನಿಗೂಢ ಸಾವಿನ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೋಳಿ ಮಾಂಸ ಸವಿಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಹಕ್ಕಿಜ್ವರದ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಕೇರಳದಿಂದ ಕೋಳಿ ಸಾಗಾಟಕ್ಕೆ ನಿಷೇಧ ಹೇರಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣಗಳು ದಾಖಲಾಗಿಲ್ಲ. ಅಲ್ಲದೇ ರಾಜ್ಯದಲ್ಲಿ ಕೋಳಿ ಹಾಗೂ ಕೋಳಿಯ ಉತ್ಪನ್ನ ಸಾಗಾಟಕ್ಕೆ ನಿಷೇಧ ಹೇರಲಾಗಿಲ್ಲ. ಜನರು ಆತಂಕ ಪಡದೇ ಕೋಳಿ ಹಾಗೂ ಮೊಟ್ಟೆಯನ್ನು ಸೇವನೆ ಮಾಡಬಹುದು ಎಂದು ತಿಳಿಸಿದ್ದಾರೆ.

Comments are closed.