ಹೆಚ್ಚಿದ ಕೊರೊನಾ, ಜಾರಿಯಾಗುತ್ತಾ ಲಾಕ್ ಡೌನ್ : ಬಿಬಿಎಂಪಿ ಆಯುಕ್ತರು ಹೀಗೆ ಹೇಳಿದ್ಯಾಕೆ ?

ಬೆಂಗಳೂರು : ನೆರೆಯ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ರೂಪಾಂತರಿ ಕೊರೊನಾ ಅಬ್ಬರ ಜೋರಾಗಿದೆ. ರಾಜ್ಯದಲ್ಲಿಯೂ ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದ್ರೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯಾಗುತ್ತಾ. ಈ ಮಾತು ಕೇಳಿಬರುತ್ತಿರೋ ಬೆನ್ನಲ್ಲೇ ಬಿಬಿಎಂಪಿ ಆಯುಕ್ತರು ಲಾಕ್ ಡೌನ್ ಹೇರಿಕೆಯ ಕುರಿತು ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ರೂಪಾಂತರಿ ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆಯ ಮಾತನ್ನಾಗಿದ್ದಾರೆ. ರೂಪಾಂತರಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಈಗಾಗಲೇ ಬ್ರಿಟನ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ವೈರಸ್‍ಗಳು ಭಾರೀ ಗಂಡಾಂತರವನ್ನು ತಂದೊಡ್ಡಿದ್ದು, ವೇಗವಾಗಿ ಹರಡುತ್ತಿದೆ. ಮಾರ್ಚ್ ವರೆಗೂ ಎಚ್ಚರಿಕೆವಹಿಸಬೇಕು. ಇಲ್ಲವಾದ್ರೆ ಹಿಂದಿನ ಪರಿಸ್ಥಿತಿಗೆ ಹೋದರೂ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿಯೂ ಕೊರೊನಾತಂಕ ಶೂರುವಾಗಿದೆ. ಹೀಗಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇರಿಸಬೇಕಾಗಿದೆ. ಬರುವವರ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಮಾಡಲಾಗುತ್ತಿದೆ. ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಲಸಿಕೆಯನ್ನು ನೀಡುವ ಕಾರ್ಯವನ್ನು ಸಮಾರೋಪಾದಿಯಲ್ಲಿ ಮಾಡಲಾಗುತ್ತಿದೆ.

ರೂಪಾಂತರಿ ಕೊರೊನಾ ಹರಡುತ್ತಿರುವುದರಿಂದ ಜನರು ಜಾಗರೂಕರಾಗಿರಬೇಕು. ಈ ಬಗ್ಗೆ ನಾವು-ನೀವು ಎಲ್ಲರೂ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಮತ್ತೆ ಲಾಕ್‍ಡೌನ್ ಪರಿಸ್ಥಿತಿ ಎದುರಿಸ ಬೇಕಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾರೂ ಉದಾಸೀನ ಮಾಡುವಂತಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಸಭೆ-ಸಮಾರಂಭಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು. ಬಿಬಿಎಂಪಿಯ 8 ವಲಯಗಳ ಜಂಟಿ ಆಯುಕ್ತರು, ವಿಶೇಷ ಆಯುಕ್ತರು, ಆರೋಗ್ಯಾ ಧಿಕಾರಿ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ ಮಂಜುನಾಥ್ ಪ್ರಸಾದ್ ಈಗಿನಿಂದಲೇ ಸಮರೋ ಪಾದಿಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಆದೇಶಿಸಿದರು.

Comments are closed.