ಮಂಗಳವಾರ, ಏಪ್ರಿಲ್ 29, 2025
HomeBreakingಹಿಂದೂ ದೇವಾಲಯಗಳ ತೆರವು ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಹಿಂದೂ ದೇವಾಲಯಗಳ ತೆರವು ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

- Advertisement -

ಬೆಂಗಳೂರು : ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ದೇವಾಲಯಗಳನ್ನುಕೆಡವಿದ್ದು ಖಂಡನೀಯ. ಇದು ಹಿಂದೂ ಭಾವನೆಗಳಿಗೆ ನೋವುಂಟುಮಾಡಿದೆ. ಇದಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯವನ್ನು ಪುನರ್ ನಿರ್ಮಾಣಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಣೇಶೋತ್ಸವ ನಿಯಮ ಸಡಿಲಿಕೆ : ಸಿಎಂ ಬೊಮ್ಮಾಯಿ ಸೂಚನೆ

ಚಾಮರಾಜನಗರ ಜಿಲ್ಲೆಯ ನಂಜನಗೂಡಿನ ಹುಚ್ಚಗಣಿ ಗ್ರಾಮದ ಪುರಾತನ ದೇವಾಲಯವನ್ನು ಜಿಲ್ಲಾಡಳಿತ ನಿನ್ನೆ ನೆಲಸಮ ಮಾಡಿದ್ದು, ಸರ್ಕಾರದ ವಿರುದ್ಧ ಆರ್ ಎಸ್ ಎಸ್ ಕಾರ್ಯಕರ್ತರು ಕೂಡ ಕಿಡಿಕಾರಿದ್ದಾರೆ. ಹಿಂದೂ ಭಾವನೆಗಳಿಗೆ ಬಿಜೆಪಿ ಸರ್ಕಾರವೇ ಧಕ್ಕೆ ತರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ದೇವಾಲಯಗಳ ತೆರವು ಕ್ರಮಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಗಡಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಖಡಕ್ ಸೂಚನೆ ಕೊಟ್ಟ ಸಿಎಂ ಬೊಮ್ಮಾಯಿ

(Clearance of Hindu temples; Siddaramaiah's outrage against BJP government)
RELATED ARTICLES

Most Popular