ಸಿಡ್ನಿ : ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ವನಿತೆಯರು ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯ ಮಳೆಗೆ ಬಲಿಯಾಗುತ್ತಿದ್ದಂತೆಯೇ ಭಾರತ ತಂಡ ಪಂದ್ಯವನ್ನಾಡದೇ ಫೈನಲ್ ಪ್ರವೇಶಿಸಿದೆ. ಕ್ರಿಕೆಟ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೆಮಿಫೈನಲ್ ಪಂದ್ಯವಾಡದೇ ತಂಡವೊಂದು ಫೈನಲ್ ಪ್ರವೇಶಿಸಿರುವುದು ಇದೇ ಮೊದಲು.

ವಿಶ್ವಕಪ್ ಪಂದ್ಯಾವಳಿಯುದ್ದಕ್ಕೂ ಉತ್ತಮ ಆಟ ಪ್ರದರ್ಶಿಸಿದ್ದ ಭಾರತೀಯ ವನಿತೆಯರು ಅಜೇಯರಾಗಿಯೇ ಸೆಮಿಫೈನಲ್ ಗೆ ಪ್ರವೇಶ ಕಂಡಿದ್ದರು. ಲೀಗ್ ಹಂತದಲ್ಲಿ ಶ್ರೀಲಂಕಾ, ನ್ಯೂಜಿಲ್ಯಾಂಡ್, ಬಾಂಗ್ಲಾ ದೇಶ ಹಾಗೂ ಆಸ್ಟ್ರೇಲಿಯಾ ವಿರುದ್ದ ಗೆಲುವನ್ನು ಕಂಡಿದ್ದರು.

ಇನ್ನೊಂದು ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ದ ನಡೆಯಲಿದ್ದು, ಸೆಮಿಫೈನಲ್ ನಲ್ಲಿ ಗೆಲ್ಲುವ ತಂಡ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಫೈನಲ್ ಪಂದ್ಯ ಭಾನುವಾರ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.