ಬ್ರಿಸ್ಬೇನ್ : ಆಸ್ಟ್ರೇಲಿಯಾ ವಿರುದ್ದದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಜಿಂಕ್ಯಾ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.
ಅಂತಿಮ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ 369 ರನ್ ಗಳಿಸಿದೆ. ನಂತರ ಬ್ಯಾಟಿಂಗ್ ನಡೆಸಿದ ಭಾರತ 336 ರನ್ ಗಳಿಸಿ ಮೊದಲ ಇನ್ನಿಂಗ್ಸ್ ನಲ್ಲಿ 33 ರನ್ ಗಳ ಹಿನ್ನಡೆಯನ್ನು ಅನುಭವಿಸಿತ್ತು.
ಎರಡನೇ ಇನ್ನಿಂಗ್ಸ್ ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಶಾರ್ದೂಲ್ ಠಾಕೂರ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಕೇವಲ 294 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.
ಮೊಹಮದ್ ಸಿರಾಜ್ 5 ಹಾಗೂ ಶಾರ್ದೂಲ್ ಠಾಕೂರ್ 4 ವಿಕೆಟ್ ಗಳಿಸಿದ್ರು. ನಂತರ 328 ರನ್ ಗಳ ಟಾರ್ಗೆಟ್ ಪಡೆದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಗಿತ್ತು. 7 ರನ್ ಗಳಿಸಿದ್ದಾ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದ್ರು.
ನಂತರ ಬ್ಯಾಟಿಂಗ್ ಗೆ ಇಳಿದ ಚೇತೇಶ್ವರ ಪೂಜಾರ ಹಾಗೂ ಶುಭಮನ್ ಗಿಲ್ ಉತ್ತಮ ಜೊತೆಯಾಟ ನಡೆಸಿದ್ರು. ಶುಭಮನ್ ಗಿಲ್ 94 ರನ್ ಗಳಿಸಿದ್ರೆ ಚೇತೇಶ್ವರ ಪೂಜಾರ 56 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ರು. ನಾಯಕ ರಹಾನೆ 24 ರನ್ ಗಳಿಸಿದ್ರೆ ಕರ್ನಾಟಕದ ಮಾಯಂಕ್ ಅಗರ್ ವಾಲ್ 9 ರನ್ ಗಳಿಗೆ ಓಟಾದ್ರು.
ವಿಕೆಟ್ ಕೀಪರ್ ವೃಷಬ್ ಪಂತ್ ಅವರ ಆಕರ್ಷಕ 89 ರನ್ ಗಳ ಆಟದ ನೆರವಿನಿಂದ ಭಾರ ತಂಡ 7 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ. ಈ ಮೂಲಕ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದರೂ ಕೂಡ ಅಂತಿಮ ಟೆಸ್ಟ್ ಗೆಲ್ಲುವ ಮೂಲಕ ದಾಖಲೆ ಬರೆದಿದೆ.