ಮುಂಬೈ : ಕೊರೊನಾ ಭೀತಿಯ ನಡುವಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿರುವ ಬಿಸಿಸಿಐ ಇದೀಗ 2021ನೇ ಸಾಲಿನ ಐಪಿಎಲ್ ಪಂದ್ಯಾವಳಿಗೆ ಸಜ್ಜಾಗುತ್ತಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಕುರಿತು ಅಧಿಕೃತ ಮಾಹಿತಿಯನ್ನು ನೀಡಿದೆ. ಫೆಬ್ರವರಿ 18ರಂದು ಚೆನ್ಮೈನಲ್ಲಿ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಘೋಷಿಸಿದೆ.

ಭಾರತ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ದ ನಾಲ್ಕು ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಐಪಿಎಲ್ ಹರಾಜು ನಡೆಯಲಿದೆ.

ಕಳೆದ ಸಾಲಿನಲ್ಲಿ ಕಳಪೆ ಪ್ರದರ್ಶನ ನೀಡಿದ ಬಹುತೇಕ ಆಟಗಾರರಿಗೆ ಟೀಮ್ ಗಳು ಈಗಾಗಲೇ ಕೋಕ್ ಕೊಟ್ಟಿದ್ದು, ಹಿರಿಯ ಆಟಗಾರರನ್ನೇ ತಂಡದಿಂದ ಬಿಡುಗಡೆ ಮಾಡಿವೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, ಗ್ಲೇನ್ ಮ್ಯಾಕ್ಸ್ ವೆಲ್, ಸುರೇಶ್ ರೈನಾ ಸೇರಿದಂತೆ ಹಲವು ಆಟಗಾರರು ಈ ಬಾರಿ ಮತ್ತೆ ಹರಾಜಾಗಬೇಕಾಗಿದೆ.

ಇನ್ನು ಒಂದು ತಂಡದಿಂದ ಮತ್ತೊಂದು ತಂಡಕ್ಕೆ (ವಿಂಡೋ) ವರ್ಗಾವಣೆ ಮಾಡಿಕೊಳ್ಳಲು ಫೆಬ್ರವರಿ 4ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.