ಮಂಗಳೂರು : ಕಡಲತಡಿ ಮಂಗಳೂರಲ್ಲಿ ಐಟಿ ಅಧಿಕಾರಿಗಳು ಎರಡನೇ ದಿನವೂ ದಾಳಿ ನಡೆಸಿದ್ದಾರೆ. ಕಣಚೂರು ಆಸ್ಪತ್ರೆಯೆ ಮೇಲಿನ ದಾಳಿಯ ಬೆನ್ನಲ್ಲೇ ಐಟಿ ಅಧಿಕಾರಿಗಳು ಶಾಸಕ ಯು.ಟಿ.ಖಾದರ್ ಸಹೋದರ ಡಾ.ಇಫ್ತಿಕಾರ್ ಆಲಿಗೆ ಸೇರಿದ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ.
ಮಂಗಳೂರು ನಗರದ ಲೈಟ್ ಹೌಸ್ ಬಳಿಯಲ್ಲಿರುವ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಿನ್ನೆಯಷ್ಟೇ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಕಣಚೂರು ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದರು.
ಕಣಚೂರು ಆಸ್ಪತ್ರೆಯಲ್ಲಿ ಡಾ.ಇಫ್ತಿಕಾರ್ ಆಲಿ ಅವರು ಪಾಲುದಾರರಾಗಿದ್ದು, ಇಫ್ತಿಕಾರ್ ಅವರು ರಾಜೀವ್ ಗಾಂಧಿ ವಿವಿ ಸಿಂಡಿಕೇಟ್ ಸದಸ್ಯರೂ ಹೌದು. ಕಣಚೂರು ಮೆಡಿಕಲ್ ಕಾಲೇಜಿನ ಮೇಲೆ ನಡೆದಿರುವ ದಾಳಿಯ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಪಾರ್ಟ್ ಮೆಂಟ್ ನಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎನ್ನಲಾಗುತ್ತಿದೆ. ಐಟಿ ದಾಳಿ ಇನ್ನೂ ಮುಂದುವರಿಯುವ ಸಾಧ್ಯತೆಯಿದೆ.