ಉಡುಪಿ : ಎಎಸ್ಐಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಠಾಣೆಯನ್ನು ವೀರಭದ್ರ ದೇವಸ್ಥಾನಕ್ಕೆ ಶಿಫ್ಟ್ ಮಾಡಲಾಗಿದ್ದು, ಎಎಸ್ಐ ಸಂಕರ್ಪದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಕೋಟದಿಂದ ನಿತ್ಯವೂ ಬಸ್ಸಿನಲ್ಲಿ ಕಾಪು ಠಾಣೆಗೆ ಬರುತ್ತಿದ್ದ ಎಎಸ್ಐಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲೀಗ 48 ಗಂಟೆಗಳ ಕಾಲ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸ್ ಮಾಡಲಾಗುತ್ತಿದೆ. ಎಎಸ್ಐ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎಎಸ್ಐ ನಿತ್ಯವೂ ಬಸ್ಸಿನಲ್ಲಿ ಸಂಚರಿಸುತ್ತಿದ್ದು, ಎಎಸ್ಐ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯ ಇದೀಗ ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ.