ಬೆಂಗಳೂರು: ಕೊರೋನಾ ಆರ್ಭಟ ಕಡಿಮೆಯಾಗುತ್ತಿದೆ ಎಂಬ ಸಮಾಧಾನದ ನಡುವೆಯೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ವಿಚಾರವನ್ನು ಸ್ವತಃ ಡಿವಿಎಸ್ ಖಚಿತಪಡಿಸಿದ್ದಾರೆ.

ಡಿವಿಎಸ್ವೈದ್ಯಕೀಯ ಪರೀಕ್ಷೆ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವಿಚಾರವನ್ನು ಸ್ವತಃ ಡಿ.ವಿ.ಸದಾನಂದ ಗೌಡರು ಖಚಿತಪಡಿಸಿದ್ದಾರೆ. ಟ್ವೀಟ್ ನಲ್ಲಿ ಈ ವಿಚಾರ ಹಂಚಿಕೊಂಡಿರುವ ಡಿವಿಎಸ್, ಕೊರೋನಾ ವೈರಸ್ ನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದೆ.
ತಪಾಸಣೆಯಲ್ಲಿ ಕೊರೋನಾ ವೈರಸ್ ಸೋಂಕು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆ ಮೇರೆಗೆ ಸ್ವಯಂ ಪ್ರೇರಿತನಾಗಿ ಗೃಹ ಬಂಧನಕ್ಕೊಳಗಾಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಕೆಲದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು,ಸಾರ್ವಜನಿಕರು ಪರೀಕ್ಷೆಗೊಳಪಡುವಂತೆ ಡಿವಿಎಸ್ ಮನವಿ ಮಾಡಿದ್ದಾರೆ.