Karnataka 2nd PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬದಲಾವಣೆ ತರಲು ಸರಕಾರ ಚಿಂತನೆ

(Karnataka 2nd PUC Exam 2023) ಕರ್ನಾಟಕ 2ನೇ ಪಿಯುಸಿ ಪರೀಕ್ಷೆ 2023ರ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಮಾರ್ಚ್ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಈ ನಡುವೆ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯನ್ನು ನಡೆಸಿದ್ದು, ಇದರಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2023 (Karnataka 2nd PUC Exam 2023)ರ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಬದಲಾವಣೆಗಳನ್ನು ತರುವುದರ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕ ದಿತೀಯ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ 15 ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಚಿಂತನೆ ನಡೆಸಿದೆ.

ಈ ಬದಲಾವಣೆಯನ್ನು ತರುವ ಮೂಲ ಉದ್ದೇಶವು ಫಲಿತಾಂಶವನ್ನು ಹೆಚ್ಚಿಸುವುದು. ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶಗಳೊಂದಿಗೆ ಹೋಲಿಸಿದಾಗ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಶೇಕಡಾವಾರು ಮತ್ತು ಅಂಕಗಳ ಸಾಮರ್ಥ್ಯವು ಕಡಿಮೆಯಾಗುತ್ತಿದೆ. ಕಳೆದ ಬಾರಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು. ಆದರೆ CBSE ಫಲಿತಾಂಶವು ಶೇಕಡಾ 90 ಕ್ಕಿಂತ ಹೆಚ್ಚು ಬಂದಿತ್ತು. ವೃತ್ತಿಪರ ಕೋರ್ಸ್‌ಗಳಲ್ಲಿ ಸೀಟುಗಳಿಗಾಗಿ CBSE ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವ ಸವಾಲನ್ನು ವಿದ್ಯಾರ್ಥಿಗಳು ಎದುರಿಸುತ್ತಾರೆ. ಹಾಗಾಗಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೆಚ್ಚಿಸಿ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ವ್ಯವಸ್ಥೆ ಅಳವಡಿಸಿಕೊಳ್ಳಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಪ್ರಸ್ತುತ, ಪಿಯುಸಿ ಪ್ರಶ್ನೆ ಪತ್ರಿಕೆಯು ವಿವರಣಾತ್ಮಕ ಉತ್ತರಗಳನ್ನು ಮಾತ್ರ ಒಳಗೊಂಡಿದೆ.

ಇದನ್ನೂ ಓದಿ : ಶಿಕ್ಷಣ ಇಲಾಖೆ ಹೊಸ ಆದೇಶ : ಶಾಲೆಯ ಊಟದ ಸಮಯ ಬದಲಾವಣೆ

ಇದನ್ನೂ ಓದಿ : KSP exam date: 70 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ: ಡಿ.18ರಂದು ನಡೆಯಲಿದೆ ಲಿಖಿತ ಪರೀಕ್ಷೆ

ವಿದ್ಯಾರ್ಥಿಗಳು ಒಂದು ಅಂಕದ ಪ್ರಶ್ನೆಗೆ ವಿವರಣಾತ್ಮಕ ಉತ್ತರಗಳನ್ನು ಬರೆಯಬೇಕು. ಹಾಗಾಗಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಪದವಿ ಕಾಲೇಜುಗಳ ಪ್ರವೇಶಕ್ಕೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮುಖ್ಯ. ಇತ್ತೀಚಿನ ವರ್ಷಗಳಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಕಡಿಮೆಯಾಗುತ್ತಿದೆ. ಬಹು ಆಯ್ಕೆಯ ಪ್ರಶ್ನೆಗಳ ಅಳವಡಿಕೆಯಿಂದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಳದಿಂದ ಪದವಿ ಪ್ರವೇಶಕ್ಕೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಈ ಚಿಂತನೆಯ ಹಿಂದಿದೆ.

Karnataka 2nd PUC Exam 2023 time table has already been released. The exams will be held in the month of March. Meanwhile, the state government has decided to bring changes in the PUC examination system.

Comments are closed.