ಬ್ರಿಟನ್ ಆಯ್ತು, ಇದೀಗ ಬ್ರಿಜಿಲ್ ಭೀತಿ : ರಾಜ್ಯದಲ್ಲಿ ಮತ್ತೆ ಕೊರೊನಾ ಕಟ್ಟೆಚ್ಚರ…!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಮತ್ತೆ ಆತಂಕವನ್ನು ಮೂಡಿಸುತ್ತಿದೆ. ಇಷ್ಟು ದಿನ ಬ್ರಿಟನ್ ರೂಪಾಂತರಿ ಕೊರೊನಾ ಸೋಂಕಿನ ಬಗ್ಗೆ ಎಚ್ಚರವಹಿಸುತ್ತಿದ್ರೆ, ಇದೀಗ ಬ್ರಿಜಿಲ್ ಕೊರೊನಾ ಸೋಂಕಿನ ಆತಂಕ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ.

ಬ್ರಿಟನ್ ನಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ, ಬ್ರಿಜಿಲ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿಯೂ ರೂಪಾಂತರಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇದೇ ವೈರಸ್ ಸೋಂಕಿನಿಂದಾಗಿ ರಾಜ್ಯಕ್ಕೂ ಕಂಟಕ ಭೀತಿ ಎದುರಾಗಿದೆ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಅಲರ್ಟ್ ಆಗಿದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚಿಸಲಾಗಿದೆ.

ಬ್ರಿಟನ್ ನಿಂದ ಬರುವ ಪ್ರಯಾಣಿಕರಿಗೆ ಈಗಾಗಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಲಾಗುತ್ತಿದ್ದು, ಇದೀಗ ಬ್ರಿಜಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ಬರುವವರನ್ನೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದೆ. ಅಲ್ಲದೇ ರಾಜ್ಯಕ್ಕೆ ಬರುವವರ ಕೈಯಲ್ಲಿ ನೆಗೆಟಿವ ವರದಿ ಇದ್ದರೂ ಕೂಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಲೇ ಬೇಕು.

ಇನ್ನು ಬ್ರಿಜಿಲ್, ದಕ್ಷಿಣ ಆಫ್ರಿಕಾದಿಂದ ಬರುವವರನ್ನು 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಆರ್ ಟಿಪಿಸಿಆರ್ ವರದಿ ಬಂದ ನಂತರ ಮತ್ತೆ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದ್ದು, 7 ದಿನಗಳ ನಂತರ ಮತ್ತೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Comments are closed.