ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆಗೆ ಮುಹೂರ್ತ ನಿಗದಿ….! ಅಗಸ್ಟ್ 28, 29 ರಂದು ಸಿಇಟಿ ಎಕ್ಸಾಂ…!!

ಬೆಂಗಳೂರು: ಮೆಡಿಕಲ್, ಇಂಜೀನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ  ಸಿಇಟಿ ಪರೀಕ್ಷೆ  ಅಗಸ್ಟ್ 28 ಹಾಗೂ 29 ರಂದು ನಡೆಯಲಿದೆ.  ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್  ಪರೀಕ್ಷಾ ದಿನಾಂಕ ನಿಗದಿಗೊಳಿಸಿ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಜೂನ್ 15 ರಂದು  ಸಿಇಟಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು,  ಈ ಭಾರಿ ನೀಟ್ ಪರೀಕ್ಷೆ ಮಾದರಿಯಲ್ಲಿ    ಕನಿಷ್ಠ ಅಂಕಗಳನ್ನು  ಪರಿಗಣಿಸುವ  ಬಗ್ಗೆ ಚಿಂತನೆ ನಡೆದಿದೆ ಎಂದು ಅಶ್ವತ್ಥ ನಾರಾಯಣ್ ವಿವರಣೆ ನೀಡಿದ್ದಾರೆ.

ಕೊರೋನಾ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಈ ಭಾರಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ಪ್ರಥಮ ಪಿಯುಸಿ ಫಲಿತಾಂಶ್ ಹಾಗೂ ಎಸ್ ಎಸ್ಎಲ್ ಸಿ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಹೀಗಾಗಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ಯೋ ಇಲ್ಲವೋ ಎಂಬ ಅನುಮಾನ ಸೃಷ್ಟಿಯಾಗಿತ್ತು. ಆದರೆ ಈ ಬಗ್ಗೆ ವಿವರಣೆ ನೀಡಿದ್ದ ಸಚಿವ ಅಶ್ವತ್ಥನಾರಾಯಣ್, ಪರೀಕ್ಷೆ ಖಂಡಿತಾ ನಡೆಯಲಿದೆ. ದಿನಾಂಕ ನಿಗದಿಗೊಳಿಸಿ ಪ್ರಕಟಿಸುವುದಾಗಿ ಹೇಳಿದ್ದರು.

ಈ ಮಧ್ಯೆ ಉನ್ನತ ಶಿಕ್ಷಣ ಸಚಿವರಿಗೆ ಪತ್ರಬರೆದಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಭಾರಿ ಸಿಇಟಿ ಪರೀಕ್ಷೆಗೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದಂತೆ ಮನವಿ ಮಾಡಿದ್ದಾರೆ.

ಹೀಗಾಗಿ ಈ ಭಾರಿ ಸಿಇಟಿ ಫಲಿತಾಂಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

Comments are closed.