ಒಂದೇ ದಿನ 10 ಮಂದಿಗೆ ಕೊರೊನಾ : ರಾಜ್ಯದಲ್ಲಿ 207 ಮುಟ್ಟಿದ ಸೋಂಕಿತರು

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದು ಒಂದೇ ದಿನ 10ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.

ನಂಜನಗೂಡಿನ ಜುಬಿಲಿಯೆಂಟ್ ಕಾರ್ಖಾನೆಯ ಎಫೆಕ್ಟ್ ಇದೀಗ ಮೈಸೂರಿಗೆ ತಟ್ಟಿದ್ದು, ಸೋಂಕಿನ ಕುಟುಂಬದ 5 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.

ಇನ್ನು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬಲಿಯಾಗಿದ್ದ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂಬ್ಬರಿಗೆ ಕೊರೊನಾ ಸೋಂಕು ಖಚಿತವಾಗಿದೆ.

ಹೀಗಾಗಿ ಕಲಬರುಗಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 10 ದಾಟಿದೆ. ಮೈಸೂರಿನ ಜುಬಿಲಿಯೆಂಟ್ ಕಾರ್ಖಾನೆ ಹಾಗೂ ದೆಹಲಿಯ ತಬ್ಲಿಗಿ ಸಮಾವೇಶ ನಂಟು ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯನ್ನು ಹೆಚ್ಚಿಸುತ್ತಿದೆ.

Leave A Reply

Your email address will not be published.