ಕರಾವಳಿ, ರಾಯಚೂರು, ಯಾದಗಿರಿಗೆ ಬಿಗ್ ಶಾಕ್ : ಒಂದೇ ದಿನ 299 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದೊಂದು ವಾರದಿಂದಲೂ ಶತಕದ ಗಡಿದಾಟುತ್ತಿದೆ. ಆದ್ರಿಂದು ರಾಜ್ಯದಲ್ಲಿ ಬರೋಬ್ಬರಿ 299 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ಅದ್ರಲ್ಲೂ ರಾಯಚೂರು, ಯಾದಗಿರಿ, ಬೀದರ್ ಹಾಗೂ ಕರಾವಳಿಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿದಾಟಿದೆ.

ರಾಯಚೂರು ಜಿಲ್ಲೆಯಲ್ಲಿ ಮುಂಬೈ ನಂಟು ಆಪತ್ತು ತಂದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಬರೋಬ್ಬರಿ 83 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 217ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಉಡುಪಿಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ. ಇನ್ನು ಕಳೆದೊಂದು ವಾರದಿಂದಲೂ ಕೊರೊನಾ ಆತಂಕ ಮೂಡಿಸುತ್ತಿರುವ ಯಾದಗಿರಿ ಜಿಲ್ಲೆಯಲ್ಲಿ ಇಂದೂ ಕೂಡ ಬರೋಬ್ಬರಿ 44 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 285ಕ್ಕೆ ಏರಿಕೆಯಾಗುವ ಮೂಲಕ ಯಾದಗಿರಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನಕ್ಕೇರಿದೆ.

ಬೀದರ್ ಜಿಲ್ಲೆಗೂ ಕೊರೊನಾ ಸೋಂಕು ಶಾಕ್ ಕೊಟ್ಟಿದೆ. ಮುಂಬೈನಿಂದ ಬಂದಿದ್ದ ಹಲವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಂದು ಜಿಲ್ಲೆಯಲ್ಲಿ 33 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿ ಇಂದೂ ಕೂಡ 28 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗೊಮ್ಮಟನಗರ ವಿಜಯಪುರದಲ್ಲಿಯೂ ಕೊರೊನಾ ಆತಂಕ ಮೂಡಿಸಿದ್ದು, ಇಂದು 26 ಜನರಲ್ಲಿ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿಯೇ ಅತೀ ಹೆಚ್ಚು ಕೊರೊನಾ ಪೀಡಿತರರನ್ನು ಹೊಂದಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಇಂದು ಕೂಡ ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿ 21 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 357ಕ್ಕೆ ಏರಿಕೆಯಾಗಿದೆ.

ಇನ್ನು ಕೊರೊನಾ ಸೋಂಕು ಕರಾವಳಿ ಜಿಲ್ಲೆಗಳಿಗೂ ಆತಂಕವನ್ನು ತಂದೊಡ್ಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, ಉಡುಪಿಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 5 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಉಳಿದಂತೆ ಮಂಡ್ಯದಲ್ಲಿ 13, ದಾವಣಗೆರೆಯಲ್ಲಿ 6 ಹಾಗೂ ಬಳ್ಳಾರಿ, ಶಿವಮೊಗ್ಗ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 3221ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.