ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಸದ್ದು ಮಾಡುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಏರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಆರಂಭವಾಗಿದ್ದ ಶಾಲೆಗಳನ್ನು ಮತ್ತೆ ಮುಚ್ಚಲು ಸರ್ಕಾರ ನಿರ್ಧರಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆದ ದೇಶದ ಎಲ್ಲ ಸಿಎಂಗಳ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸಧ್ಯ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ನೈಟ್ ಕರ್ಪ್ಯೂ ಜಾರಿ ಮಾಡುವ ಸ್ಥಿತಿ ಇಲ್ಲ.

ಮುಂಜಾಗ್ರತಾ ಕ್ರಮವಾಗಿ ಈಗ ಆರಂಭಿಸಿರುವ 1 ರಿಂದ 9 ನೇ ತರಗತಿಗಳನ್ನು ಮತ್ತೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲಾಗುತ್ತದೆ. ಆದರೆ 1 ರಿಂದ 9 ನೇ ತರಗತಿಯ ಮಕ್ಕಳಿಗೆ ರೆಗ್ಯುಲರ್ ಕ್ಲಾಸ್ ರದ್ದುಗೊಳಿಸಿ ಆನ್ ಲೈನ್ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬಹುದು ಎಂದು ಸಿಎಂ ಹೇಳಿದ್ದಾರೆ.

ಹೀಗಾಗಿ ಮತ್ತೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆ ಇದ್ದು, ಆನ್ ಲೈನ್ ಶಿಕ್ಷಣ ನೀಡಿ ಪರೀಕ್ಷೆಗಳನ್ನು ಆನ್ ಲೈನ್ ನಲ್ಲೇ ನಡೆಸಿ ಫಲಿತಾಂಶ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.