ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷಾ ಗೊಂದಲ…! ಪರೀಕ್ಷೆ ಮುಂದೂಡುವ,ರದ್ದುಮಾಡುವ ಪ್ರಸ್ತಾಪವಿಲ್ಲ ಎಂದ ಸುರೇಶ್ ಕುಮಾರ್…!!

ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯಲಿದೆ. ಆ ವಿಷಯದಲ್ಲಿ ಯಾವುದೇ ಗೊಂದಲ ಬೇಡ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ನಡೆಸದಿದ್ದರೇ ಶಿಕ್ಷಣದ ಗುಣಮಟ್ಟದ ಮೇಲೆ ಹೊಡೆತ ಬೀಳಲಿದೆ. ಹೀಗಾಗಿ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ಚಾಮರಾಜನಗರದ ಹನೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆಯಲ್ಲಿ  ಪಾಲ್ಗೊಂಡು ಮಾತನಾಡಿದ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ ಪರೀಕ್ಷೆ ಜೂನ್ 21 ಕ್ಕೆ ನಿಗದಿಯಾಗಿದೆ. ಅಲ್ಲಿಗೆ ಇನ್ನೂ ಎರಡು ತಿಂಗಳ ಕಾಲಾವಕಾಶ ಇದೆ. ಸಧ್ಯದ ಪರಿಸ್ಥಿತಿ ನೋಡಿದರೇ ಪರೀಕ್ಷೆ ನಿರಾತಂಕವಾಗಿ ನಡೆಸುವಂತಿದೆ ಎಂದಿದ್ದಾರೆ.

ಪೋಷಕರು, ಮಕ್ಕಳು ಯಾವುದೇ ವದಂತಿಗಳಿಗೆ ಕಿವಿಗೂಡದೇ ಅಧ್ಯಯನದಲ್ಲಿ ತೊಡಗಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ಮುಂದೂಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ .

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಪರೀಕ್ಷೆ ನಡೆಸುವಂತೆ ಪತ್ರ ಬರೆದಿದ್ದಾರೆ. ಹೀಗಾಗಿ ತಜ್ಞರ ಜೊತೆ ಸಭೆ ನಡೆಸುತ್ತೇವೆ ಎಂದಿರುವ ಸುರೇಶ್ ಕುಮಾರ್, 1 ರಿಂದ 5 ನೇ ತರಗತಿ ಹಾಗೂ 6 ರಿಂದ 9 ನೇ ತರಗತಿಯ ಪರೀಕ್ಷೆಯ ಕುರಿತು ಸಧ್ಯದಲ್ಲೇ ಸೂಕ್ತ ತೀರ್ಮಾನ ನೀಡಲಾಗುವುದು ಎಂದಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಗಳನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಪಕ್ಷಗಳು ಆಡಳಿತ ಪಕ್ಷದ ಜೊತೆ ಕೈಜೋಡಿಸಿ ಆಡಳಿತ ನಡೆಸಲು ಮಾರ್ಗದರ್ಶನ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Comments are closed.