ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಸದಾ ಕಿಡಿಕಾರುತ್ತಲೇ ಇರುವ ಮಾಜಿ ಸಿಎಂ ಕುಮಾರಸ್ವಾಮಿ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ತಂದ ಬಿಜೆಪಿ ಸರ್ಕಾರಕ್ಕೆ ನಿಜವಾಗಿಯೂ ಹಸುಗಳ ಮೇಲೆ ಕಾಳಜಿ ಇಲ್ಲ ಎಂದು ಟ್ವೀಟ್ ಪ್ರಹಾರ ನಡೆಸಿದ್ದಾರೆ. ಜಾನುವಾರುಗಳ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಎಚ್ಡಿಕೆ ಸರಣಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಗೋ ರಕ್ಷಣೆಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೆಯೇ ಹೊರತು ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರ ಎಫ್ಎಂಡಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡಸಿಯೇ ಇಲ್ಲ. ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ. ಹೀಗಾಗಿ ಜಾನುವಾರುಗಳು ನರಳುತ್ತಿವೆ ಎಂದು ಎಚ್ಡಿಕೆ ಟೀಕಿಸಿದ್ದಾರೆ.
ಚಿಕ್ಕಬಳ್ಳಾಪುರ,ಬೆಂಗಳೂರು,ಬೆಂಗಳೂರು ಗ್ರಾಮಾಂತರ,ರಾಮನಗರ ಜಿಲ್ಲೆಗಳಲ್ಲಿ ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಕೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಲಸಿಕೆ ಅಭಿಯಾನವನ್ನು ತಕ್ಷಣ ನಡೆಸಬೇಕು. ತಪ್ಪಿಸಬಾರದು ಎಂದು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ,ಬೆಂಗಳೂರು,ಬೆಂಗಳೂರು ಗ್ರಾಮಾಂತರ,ರಾಮನಗರ ಜಿಲ್ಲೆಗಳಲ್ಲಿ ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಕೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಲಸಿಕೆ ಅಭಿಯಾನವನ್ನು ತಕ್ಷಣ ನಡೆಸಬೇಕು. ತಪ್ಪಿಸಬಾರದು ಎಂದು ಆಗ್ರಹಿಸಿದ್ದಾರೆ.

ಈ ಕಾಯಿಲೆಗೆ ಬಲಿಯಾದ ಜಾನುವಾರುಗಳ ಮಾಲೀಕರಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿರುವ ಎಚ್ಡಿಕೆ, ಈ ಹಿಂದೆಯೂ ಬಿಜೆಪಿ ಅಧಿಕಾರದಲ್ಲಿದ್ದಾಗ ಇದೇ ಸಮಸ್ಯೆ ಎದುರಾಗಿತ್ತು. ಈ ವೇಳೆ ನಾನೇ ಪರಿಹಾರ ನೀಡಿದ್ದೆ.ಇದನ್ನು ನೋಡಿದ ರಾಜ್ಯ ಸರ್ಕಾರ ತಾನೂ ಪರಿಹಾರ ನೀಡಿತ್ತು.
ಗೋವುಗಳ ಬಗ್ಗೆ ದೊಡ್ಡದಾಗಿ ಮಾತನಾಡುವ ಬಿಜೆಪಿ ಈಗ ನಿಜವಾಗಿಯೂ ಗೋ ರಕ್ಷಣೆಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಈ ಸಮಸ್ಯೆಗೆ ಸ್ಪಂದಿಸಬೇಕಾದ ಪಶುಸಂಗೋಪನಾ ಖಾತೆ ಸಚಿವರು ಎಲ್ಲಿದ್ದಾರೆ ಎಂದು ಸರ್ಕಾರವನ್ನು ಎಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.