ಬಿಸಿಯೂಟ ಯೋಜನೆ ಸ್ಥಗಿತ : ಸರಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿದ್ದ ಮಹತ್ವಾಕಾಂಕ್ಷಿಯ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ರಾಜ್ಯ ಸರಕಾರ ಸ್ಥಗಿತಗೊಳಿಸಿದೆ. ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಘೋಷಿಸಿದ ಪರಿಣಾಮ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗಳನ್ನು ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ನಡೆದೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಆಹಾರ ಒದಗಿಸದಿದ್ದರೆ ಸಂವಿಧಾನ ನೀಡಿದ ಜೀವಿಸುವ ಹಕ್ಕು ಉಲ್ಲಂಘನೆಯಾಗಲಿದೆ ಎಂದು ಖಾರವಾಗಿ ನುಡಿಯಿತು.

ಆಹಾರ ವಂಚಿತ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ, ಮಧ್ಯಾಹ್ನದ ಊಟ ಒದಗಿಸುವ ಬಗ್ಗೆ ಕ್ರಮ ಕೈಗೊಂಡು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಪ್ರಮಾಣಪತ್ರ ಸಲ್ಲಿಸಬೇಕು.

Comments are closed.