ಬೆಂಗಳೂರು: ಆರ್.ಆರ್.ನಗರದಲ್ಲಿ ಮತದಾನಕ್ಕೆ ದಿನಗಣನೆ ನಡೆದಿರುವ ಬೆನ್ನಲ್ಲೇ ಮೂರು ರಾಷ್ಟ್ರೀಯ ಪಕ್ಷಗಳು ಚುನಾವಣಾ ಪ್ರಚಾರ ತೀವ್ರಗೊಳಿಸಿದ್ದು, ಹಾಲಿ-ಮಾಜಿ ಸಿಎಂಗಳು ಅಖಾಡಕ್ಕೆ ಧುಮುಕಿದ್ದಾರೆ. ಈ ಮಧ್ಯೆ ಚುನಾವಣಾ ಪ್ರಚಾರದ ವೇಳೆ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್ಡಿಕೆ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೀಣ್ಯದ ಕೈಗಾರಿಕಾ ಪ್ರದೇಶದಲ್ಲಿ ಪ್ರಚಾರ ಕೈಗೊಂಡ ಮಾಜಿಸಿಎಂ ಎಚ್ಡಿಕೆ, ನಾನು ಸಿಎಂ ಆಗಿದ್ದಾಗ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡಿದ್ದೆ. ಕಾಂಪಿಟ್ ವಿತ್ ಚೀನಾ ಯೋಜನೆ ರೂಪಿಸಿದ್ದೆ. ಈಗ ಪ್ರಧಾನಿ ಮೋದಿ ಈ ಪ್ರಾಜೆಕ್ಟ್ ಹೈಜಾಕ್ ಮಾಡಿ ತಮ್ಮದೆಂದು ಬಿಂಬಿಸುತ್ತಿದ್ದಾರೆ ಎಂದು ಎಚ್ಡಿಕೆ ಆರೋಪಿಸುತ್ತಿದ್ದಾರೆ.

ಪ್ರಧಾನಿ ಮೋದಿ ತಮ್ಮ ಯೋಜನೆ ಕದ್ದಿದ್ದಾರೆ ಎಂದು ಆರೋಪ ಮಾಡಿದ ಎಚ್ಡಿಕೆ, ಲೂಟಿ ಮಾಡುವವರನ್ನು ಆಯ್ಕೆಮಾಡಬೇಡಿ ಎಂದು ಪ್ರಧಾನಿ ಹೇಳಿದ್ದಾರೆ. ಹೀಗಾಗಿ ಅಭಿವೃದ್ಧಿ ಕಾಮಗಾರಿಯಲ್ಲಿ ಹಣ ಕೊಳ್ಳೆ ಹೊಡೆದ ಬಿಜೆಪಿಯವರನ್ನು ಆಯ್ಕೆ ಮಾಡಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಜೆಡಿಎಸ್ ಅಭ್ಯರ್ಥಿ ಲೆಕ್ಕಕ್ಕಿಲ್ಲ ಎಂದು ಎಲ್ಲರೂ ಟೀಕಿಸುತ್ತಿದ್ದಾರೆ. ಇದಕ್ಕೆ ಮತದಾರರು ಚುನಾವಣೆ ಮತದಾನದ ವೇಳೆ ಉತ್ತರ ನೀಡುತ್ತಾರೆ ಎಂದು ಭರವಸೆ ಇದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.