ಬೆಂಗಳೂರು : ರಾಜ್ಯದಲ್ಲೀಗ ಪುನರ್ವಸು ಮಳೆ ಆರ್ಭಟ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನ ಗಳಿಂದಲೂ ರಾಜ್ಯದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜ್ಯದಲ್ಲಿ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಕರಾವಳಿ, ಮಲೆನಾಡಿನ ಭಾಗಗಳಲ್ಲಿ ಸುರಿದ ಮಳೆ ಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಲೆನಾಡಿನ ಜೀವನದಿಗಳಾದ ತುಂಗಾ, ಭದ್ರಾ, ಶರಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಕುಮಾರಧಾರ ನದಿ ಗಳಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದೆ. ಸಮುದ್ರ ತೀರದಲ್ಲಿ ಭಾರೀ ಅಲೆಗಳು ಅಪ್ಪಳಿಸುತ್ತಿದ್ದು, ಕರಾವಳಿ ತೀರದಲ್ಲಿ ಕಡಲಕೊರೆತದ ಭೀತಿ ಉಂಟಾಗಿದೆ.

ಇದನ್ನೂ ಓದಿ : ಮಂಗಳೂರಲ್ಲಿ ಭಾರೀ ಮಳೆಗೆ ತಡೆಗೋಡೆ ಕುಸಿತ : 13ಕ್ಕೂ ಅಧಿಕ ಬೈಕುಗಳು ಜಖಂ
ರಾಜ್ಯದಲ್ಲಿ ಮಳೆ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ ಭಾರೀ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಆದರೆ ಮಲೆನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಹಾಗೂ ಎರಡು ದಿನ ಎಲ್ಲೋ ಅಲರ್ಟ್ ಘೋಷಿಸಿದೆ.

ಇನ್ನು ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಮಳೆ ಮುಂದುವರಿಯಲಿದ್ದು, ದಾವಣಗೆರೆ, ಮೈಸೂರು, ಚಿತ್ರದುರ್ಗ, ಬೆಳಗಾವಿ, ಧಾರವಾಡ, ಕೊಪ್ಪಳ, ಹಾವೇರಿಯಲ್ಲಿಯೂ ಮಳೆಯಾಗುವ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಸಿಸಿದೆ.