ಅಗಸ್ಟ್ ಮಾಸಾಂತ್ಯಕ್ಕೆ ಹೆಚ್ಚಲಿದೆ ಕೊರೊನಾ ಸಂಖ್ಯೆ : ಸಚಿವ ಡಾ.ಸುಧಾಕರ್

0

ಬಳ್ಳಾರಿ : ರಾಜ್ಯದಲ್ಲಿ 3 ಸಾವಿರಕ್ಕೂ ಹೆಚ್ಚು ಕೊರೊನಾ ಸಕ್ರೀಯ ಪ್ರಕರಣಗಳಿದ್ದು ಶೇ.97ರಷ್ಟು ಮಂದಿಯ ಯಾವುದೇ ರೋಗಲಕ್ಷಣಗಳಿಲ್ಲ. ಅಲ್ಲದೇ ಅಗಸ್ಟ್ ಮಾಸಾಂತ್ಯಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ ಎನ್ನುವುದು ಅಧ್ಯಯನದಿಂದ ತಿಳಿದುಬಂದಿದೆ. ಹೀಗಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಇತ್ತೀಚಿನ ದಿನಗಳಲ್ಲಿ ಇನ್ ಪ್ಲ್ಯೂಯೆಂಜಾ ಮಾದರಿಯ ರೋಗದಿಂದ ಬಳಲುವರಿಗೆ ಕೊರೊನಾ ಸೋಂಕು ತಗಲುತ್ತಿದೆ. ಹೀಗಾಗಿ ಅವರನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲು ಸೂಚನೆಯನ್ನು ನೀಡಲಾಗಿದೆ. ಅದ್ರಲ್ಲೂ 60 ವರ್ಷ ಮೇಲ್ಪಟ್ಟವರನ್ನೇ ಮೊದಲು ಚಿಕಿತ್ಸೆ ನೀಡಲಾಗುತ್ತದೆ.

ಇದೀಗ ಮಳೆಗಾಲ ಆರಂಭಗೊಂಡಿರುವುದರಿಂದ ಹವಾಮಾನ ಬದಲಾವಣೆಯಿಂದ ಜ್ವರ, ಕೆಮ್ಮು, ನೆಗಡಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜ್ವರ ಬಂದವರು ಫೀವರ್ ಕ್ಲಿನಿಕ್ ಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ನೀಡಿದ್ದಾರೆ.

Leave A Reply

Your email address will not be published.