ಮಂಗಳವಾರ, ಏಪ್ರಿಲ್ 29, 2025
HomeBreakingMekedatu: ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ…! ಗುಡುಗಿದ ಯಡಿಯೂರಪ್ಪ…!!

Mekedatu: ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ…! ಗುಡುಗಿದ ಯಡಿಯೂರಪ್ಪ…!!

- Advertisement -

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರು ಪೊರೈಕೆ ಉದ್ದೇಶದಿಂದ ಕರ್ನಾಟಕ  ರೂಪಿಸಿರುವ ಮೇಕೆದಾಟು ಯೋಜನೆ  ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಬಿಎಸ್ವೈ ಗುಡುಗಿದ್ದಾರೆ.

ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್ವೈ, ನಾವು ಕಾನೂನಿನ ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣಮಾಡುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದಿದ್ದಾರೆ.

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ.  ಯೋಜನೆಯಿಂದ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳಿಗೆ ನೆರವಾಗಲಿದೆ. ಹೀಗಾಗಿ ಸೌಹಾರ್ದಯುತವಾಗಿ ಯೋಜನೆ ಜಾರಿಮಾಡುವ ಯೋಚನೆಯಿತ್ತು.

ಆದರೆ ತಮಿಳುನಾಡಿನಿಂದ ನೀರಿಕ್ಷಿತ ಸಹಕಾರ ಸಿಕ್ಕಿಲ್ಲ. ಆದರೆ ಇದರಿಂದ ಮೇಕೆದಾಟು ಯೋಜನೆ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಸಿಎಂ ಬಿಎಸ್ವೈ ಸ್ಪಷ್ಟಿಕರಣ ನೀಡಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಯೋಜನೆಯನ್ನು ಕೈಬಿಡುವಂತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸಿಎಂ ಬಿಎಸ್ವೈಗೆ ಪತ್ರ ಬರೆದಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

RELATED ARTICLES

Most Popular