ಕರ್ನಾಟಕದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ : ಕಠಿಣ ಕ್ರಮಕೈಗೊಳ್ಳಲು ಪೊಲೀಸರಿಗೆ ಪುಲ್ ಪವರ್

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯನ್ನು ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಜೂನ್ 7ರ ಬೆಳಗ್ಗೆ 6ರ ವರೆಗೆ ರಾಜ್ಯದಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಲಿದೆ. ಮೇ 24ರ ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯನ್ನು ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮುಂದಿನ 14 ದಿನಗಳ ಕಾಲ ಬೆಂಗಳೂರು ಹಾಗೂ ರಾಜ್ಯದಾದ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗ್ಗೆ 10 ಗಂಟೆಯ ವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ. 9.45ರ ಒಳಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಬೇಕು. ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸರಿಗೆ ಪುಲ್ ಪವರ್ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

https://kannada.newsnext.live/home-sealed-down-of-corona-infected-bold-decision-of-udupi-district-collector/

Comments are closed.