NEWS NEXT BIG IMPACT : ಮಾರ್ಚ್ 31ರವರೆಗೂ ನಿಷೇಧಾಜ್ಞೆ : 9 ಜಿಲ್ಲೆಗಳು ಲಾಕ್ ಡೌನ್

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತೀವ್ರತೆ ಹೆಚ್ಚುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ದಿಟ್ಟಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಸೋಂಕು ದೃಢಪಟ್ಟಿರುವ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ. ಮಾತ್ರವಲ್ಲ ಜನತಾ ಕರ್ಪ್ಯೂ ಮುಗಿಯುತ್ತಿದ್ದಂತೆಯೇ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಧಾರವಾಡ, ಕೊಡಗು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದೆ. NEWS NEXT ಇನ್ನೇರಡು ದಿನಗಳಲ್ಲಿ ಲಾಕ್ ಡೌನ್ ಅನ್ನೋ ಶೀರ್ಷಿಕೆಯಡಿಯಲ್ಲಿ ಸುದ್ದಿಯನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತಿರೋ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ.

ಅಗತ್ಯಸೇವೆಗೆ ಹೊರತು ಪಡಿಸಿ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ. ಮಾತ್ರವಲ್ಲ ರಾಜ್ಯದಾದ್ಯಂತ ನಿಷೇಧಾಜ್ಞೆಯನ್ನು ಹೇರಲಾಗಿದ್ದು, ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮಗಳನ್ನು ಕೈಗೊಂಡಿದೆ. ಸೋಮವಾರ ರಾಜ್ಯದಾದ್ಯಂತ ಸಂಚಾರ ಸಂಪೂರ್ಣ ರದ್ದು ಮಾಡಲಾಗಿದ್ದು, ಮಾರ್ಚ್ 31ರ ವರೆಗೆ ಎಲ್ಲಾ ಎಸಿ ಬಸ್ಸುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ನಾಳೆ ಪಿಯುಸಿ ಪರೀಕ್ಷೆ ಎಂದಿನಂತೆಯೇ ನಡೆಯಲಿದೆ.

Leave A Reply

Your email address will not be published.