ರಾಜ್ಯದಲ್ಲಿ 3 ದಿನ ಬಾರೀ ಮಳೆ : ಕರಾವಳಿ, ಮಲೆನಾಡಲ್ಲಿ ಹೈ ಅಲರ್ಟ್

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದಲೇ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೇ ಮಳೆ ಸುರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚುವ ಸಾಧ್ಯತೆಯಿದೆ. ಇನ್ನು ಉತ್ತರ ಕರ್ನಾಟಕ ಭಾಗದ ರಾಯಚೂರು, ಬೀದರ್, ಗುಲಬರ್ಗಾ, ಕೊಪ್ಪಳ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳುವ ಸಾಧ್ಯತೆಯಿರುವುದರಿಂದಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಮುನ್ಸೂಚನೆಯನ್ನು ನೀಡಲಾಗಿದೆ.

Comments are closed.