ಸಾಲುಮರದ ತಿಮ್ಮಕ್ಕನ ಸ್ಥಿತಿ ಗಂಭೀರ…! ಅಪೋಲೋ ಆಸ್ಪತ್ರೆಗೆ ದಾಖಲು…!!

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರಗೆ ದಾಖಲಿಸಲಾಗಿದೆ.

ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದಿದ್ದ ಸಾಲು ಮರದ ತಿಮ್ಮಕ್ಕನ ಬೆನ್ನಿನ ಮೂಳೆ  ಫ್ರ್ಯಾಕ್ಚರ್ ಆಗಿದೆ ಎನ್ನಲಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಸಧ್ಯ ಸಾಲುಮರದ ತಿಮ್ಮಕ್ಕನಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರೋದರಿಂದ  ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪೋಲೋ ಎಮರ್ಜೆನ್ಸಿ ವಾರ್ಡ್ ನಲ್ಲಿ ಸಾಲು ಮರದ ತಿಮ್ಮಕ್ಕನವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ಉಮೇಶ್ ಮಾಹಿತಿ ನೀಡಿದ್ದಾರೆ.

ಹಲವು ವರ್ಷಗಳಿಂದ ಸಾಲು-ಸಾಲು ಮರಗಳನ್ನು ನೆಟ್ಟು ಬೆಳೆಸಿದ ಪರಿಸರವಾದಿ ಸಾಲುಮರದ ತಿಮ್ಮಕ್ಕನಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Comments are closed.