ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ನಡುವಲ್ಲೇ ಅಕ್ಟೋಬರ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಕೇಂದ್ರ ಸರಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹೀಗಾಗಿ ಶಾಲಾರಂಭದ ಕುರಿತು ಗೊಂದಲ ಏರ್ಪಟ್ಟಿತ್ತು.ಇದೀಗ ರಾಜ್ಯ ಸರಕಾರ ಕೂಡ ಸದ್ಯಕ್ಕೆ ಶಾಲಾರಂಭ ಮಾಡದಿರಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ಆರಂಭಿಸುವ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಆದರೆ ಅದಕ್ಕೂ ಮೊದಲು ಪೋಷಕರ ಒಪ್ಪಿಗೆಯನ್ನು ಪಡೆಯಬೇಕಿದೆ. ಆದರೆ ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದ್ದಾರೆ. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದಿದ್ದಾರೆ. ಅಲ್ದಲೇ ಕೊರೊನಾ ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಜ್ಯದಾದ್ಯಂತ ಶಾಲಾರಂಭಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಭೆಯಲ್ಲಿ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಇನ್ನು ಶಾಲಾರಂಭಕ್ಕೆ ಕುರಿತಂತೆ ಪೋಷಕರು, ತಜ್ಞರ ಅಭಿಪ್ರಾಯವನ್ನೇ ಪಡೆದು ತೀರ್ಮಾನಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.