ಬೆಂಗಳೂರು : ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಜ್ಞರ ಜೊತೆಗೆ ಸಭೆ ನಡೆಸುತ್ತಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಸುದರ್ಶನ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿತ್ತು. ಇದೀಗ ರಾಜ್ಯ ಸರಕಾರ 1 ರಿಂದ 9ನೇ ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ತಜ್ಞರ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
ಒಂದೊಮ್ಮೆ ಶಾಲಾರಂಭ ಮಾಡಿದ್ರೆ ಎದುರಾಗುವ ಸಮಸ್ಯೆಗಳ ಬಗ್ಗೆ ಹಾಗೂ ಶಾಲಾರಂಭದ ವೇಳೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ.