ಗುಡ್ ನ್ಯೂಸ್ : ರಾಜ್ಯದಲ್ಲಿ 20 ಸಾವಿರ ಶಿಕ್ಷಕರ ನೇಮಕ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಬರೋಬ್ಬರಿ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಶಿಕ್ಷಣ ಸಚಿವರು ಸಭೆ ನಡೆಸಿದ್ರು. ಸಭೆಯ ನಂತರ ಮಾತನಾಡಿದ ಅವ್ರು, ಶಿಕ್ಷಕ ಮಿತ್ರ ಆಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ, 2,500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದರು.

ಕಳೆದ ಬಾರಿ 2,404 ಶಿಕ್ಷಕರಿಗೆ ಪ್ರೌಢಶಾಲಾ ಶಿಕ್ಷಕರಾಗಿ, 1,342 ಶಿಕ್ಷಕರಿಗೆ ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ನೀಡಲಾಗಿದೆ. ಅಲ್ಲದೇ 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Comments are closed.