C.T.Ravi: ಕರ್ನಾಟಕಕ್ಕೂ ಜನಸಂಖ್ಯಾ ನಿಯಂತ್ರಣ ಕಾನೂನು ಬೇಕು…! ಸಿ.ಟಿ.ರವಿ ಟ್ವೀಟ್…!!

ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾದ ಜನಸಂಖ್ಯಾ ನಿಯಂತ್ರಣ ಕಾನೂನು ದೇಶದಾದ್ಯಂತ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ಈ ಕಾನೂನಿನ ಅಗತ್ಯ ಕರ್ನಾಟಕಕ್ಕೂ ಇದೇ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚರ್ಚೆ ಹುಟ್ಟುಹಾಕಿದ್ದಾರೆ.

ಕರ್ನಾಟಕದಲ್ಲೂ ಜನಸಂಖ್ಯೆ ಹೆಚ್ಚುತ್ತಿದೆ. ಈ ಜನಸಂಖ್ಯೆಯ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕವೂ ಸಹ  ಉತ್ತರ ಪ್ರದೇಶ ಹಾಗೂ ಅಸ್ಸಾಂ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ರೂಪಿಸಲು ಇದು ಸಕಾಲ ಎಂದು ಸಿ.ಟಿ.ರವಿ ಅಭಿಪ್ರಾಯಿಸಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರೋದರಿಂದ ಜನಸಂಖ್ಯಾ ಸ್ಪೋಟ ಸಂಭವಿಸಿದಲ್ಲಿ ನಾಗರೀಕರ ಅಗತ್ಯಗಳನ್ನು ಪೊರೈಸುವುದು ಕಷ್ಟವಾಗುತ್ತದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಕಾನೂನಿನ ಅಗತ್ಯವಿದೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಕರ್ನಾಟಕದ ಜನಸಂಖ್ಯೆ 7 ಕೋಟಿ ದಾಟಿದೆ. ಹೀಗಾಗಿ ನಾವು ಈ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ. ಅಸ್ಸಾಂ ಹಾಗೂ ಉತ್ತರ ಪ್ರದೇಶ ಕೈಗೊಂಡಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಿದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಯಾವುದೇ ಸರಕಾರಿ ಸೌಲಭ್ಯಗಳನ್ನು ಪಡೆಯುವಂತಿಲ್ಲ ಎಂದು ಕಾನೂನು ರೂಪಿಸಲಾಗುತ್ತಿದ್ದು, ಇದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

Comments are closed.