6-8 ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಫೆಬ್ರವರಿ 22 ರಿಂದಲೇ ಕ್ಲಾಸ್ ಸ್ಟಾರ್ಟ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಫೆಬ್ರವರಿ 22 ರಿಂದ ತರಗತಿಗಳು ಆರಂಭಗೊಳ್ಳಲಿದೆ ಎಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯನ್ನು ನಡೆಸಲಾಗುತ್ತಿದ್ದು, ಇದೀಗ ಪೂರ್ಣಪ್ರಮಾಣದಲ್ಲಿ ತರಗತಿಯಲ್ಲಿಯೇ ವಿದ್ಯಾರ್ಥಿಗಳು ಪಾಠ ಕೇಳಲು ಅವಕಾಶ ಕಲ್ಪಿಸಲಾಗುತ್ತಿದೆ. ಇನ್ನು 1 ರಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ವಿದ್ಯಾಗಮ ಯೋಜನೆಯನ್ನು ಮುಂದುವರಿಸಲಾಗುತ್ತಿದೆ. ಆದರೆ ಯಾವುದೇ ವಿದ್ಯಾರ್ಥಿಯೂ ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗಬೇಕೆಂಬ ನಿಯಮವಿಲ್ಲ. ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರಿಂದ ಅನುಮತಿ ಪತ್ರವನ್ನು ತರಬೇಕು ಎಂದಿದ್ದಾರೆ.

https://kannada.newsnext.live/next-academic-year-start-july-15-minister-sureshkumar/

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗ ಹಾಗೂ ಬೆಂಗಳೂರಿನಲ್ಲಿ ಕೇವಲ 8ನೇ ತರಗತಿಗಳನ್ನು ಮಾತ್ರವೇ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನಕೈಗೊಳ್ಳಲಾಗುತ್ತದೆ. ಅಲ್ಲದೇ ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಗಳನ್ನು ಆರಂಭಿಸಲು ಸೂಚನೆಯನ್ನು ನೀಡಲಾಗಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ ಓಡಿಸಲು ಮನವಿ ಮಾಡಲಾಗಿದೆ ಎಂದಿದ್ದಾರೆ.

Comments are closed.